ಕೋವಿಡ್ ಹಿನ್ನೆಲೆಯಲ್ಲಿ ಗುಡಿಬಂಡೆಯಲ್ಲಿ ಸರಳವಾಗಿ ಶಿಕ್ಷಕರ ದಿನಾಚರಣೆ.
0 Comments । By Black Cat News । 5 September, 2021
ಚಿಕ್ಕಬಳ್ಳಾಪುರ
(ಗುಡಿಬಂಡೆ): ಪಟ್ಟಣದ ತಾಲ್ಲೂಕು ಕಛೇರಿ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ
ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ. ಶಿಕ್ಷಕರು ವಿದ್ಯಾರ್ಥಿಗಳಿಗೆ ಕೇವಲ ಪುಸ್ತಕದಲ್ಲಿರುವ ವಿಚಾರವನ್ನು ಮಾತ್ರ ಬೋಧಿಸದೇ, ಜೀವನದಲ್ಲಿ ಪ್ರಮುಖವಾಗಿ ಬೇಕಾಗುವಂತಹ ಮೌಲ್ಯಾಧಾರಿತ ಶಿಕ್ಷಣವನ್ನು ನೀಡಬೇಕು. ಆಗ ಮಾತ್ರ ತಾವು ಉತ್ತಮ ಶಿಕ್ಷಕರಾಗಲು ಸಾಧ್ಯ. ಈ ಹಿಂದೆ ಗುರುಕುಲಗಳಲ್ಲಿ ಮಕ್ಕಳಿಗೆ ಜೀವನಕ್ಕೆ ಬೇಕಾದಂತಹ ಮಾನವೀಯ ಮೌಲ್ಯಗಳ ಬಗ್ಗೆ, ಸಾಮಾಜಿಕ ಸೇವೆಗಳ ಬಗ್ಗೆ ತಿಳಿಸುತ್ತಿದ್ದರು. ಆದರೇ ಈಗ ಖಾಸಗಿ ಶಾಲೆಗಳನ್ನು ಪ್ರಾರಂಭಿಸಿ ಆ ಮೂಲಕ ವ್ಯಾಪಾರ ಮಾಡಲು ಕೆಲವು ಸಂಸ್ಥೆಗಳು ಹೊರಟಿವೆ. ಶಿಕ್ಷಣ ಈಗ ಉತ್ತಮವಾದ ವ್ಯಾಪಾರ ಉದ್ಯಮವಾಗಿದೆ. ಆದರೆ ಸರ್ಕಾರಿ ಶಾಲೆಗಳಲ್ಲಿ ಓದಿದ ಮಕ್ಕಳು ರಾಜ್ಯಕ್ಕೆ ಹೆಸರುಗಳಿಸಿಕೊಡುತ್ತಿದ್ದಾರೆ. ಇದಕ್ಕೆ ಉತ್ತಮ ಉದಾಹರಣೆ ಕಳೆದ ಬಾರಿ ಎಸ್.ಎಸ್.ಎಲ್.ಸಿ ಪರೀಕ್ಷೆ. ಶಿಕ್ಷಕರಾದ ತಾವುಗಳು ಯಾವುದೇ ಕಾರಣಕ್ಕೂ ಶಿಕ್ಷಕ ವೃತ್ತಿಗೆ ಅಗೌರವ ತರುವಂತೆ ನಡೆದುಕೊಳ್ಳಬಾರದೆಂದರು.
ನಂತರ ತಹಸೀಲ್ದಾರ್ ಸಿಗ್ಬತ್ತುಲ್ಲಾ ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಕ್ಷಕರು ಕೇವಲ ಥಿಯರಿ ತರಗತಿಗಳನ್ನು ಮಾತ್ರ ಮಾಡದೇ ಪ್ರಾಕ್ಟಿಕಲ್ ಆಗಿ ಬೋದನೆ ಮಾಡಬೇಕಿದೆ. ಆಗ ವಿದ್ಯಾರ್ಥಿಗಳು ಮತಷ್ಟು ಕಲಿಕೆ ಮಾಡಲು ಸಾಧ್ಯವಾಗುತ್ತದೆ. ನಾನು ವಿದ್ಯಾರ್ಥಿಯಾಗಿದ್ದ ಸಮಯದಲ್ಲಿ ಶಿಕ್ಷಕರನ್ನು ತಲೆಎತ್ತಿ ಮಾತನಾಡಲು ಸಹ ಭಯ ಪಡುತ್ತಿದ್ದೆವು. ಅಷ್ಟರ ಮಟ್ಟಿಗೆ ಗೌರವ ನೀಡುತ್ತಿದ್ದೆವು. ಆದರೆ ಇಂದಿನ ವಿದ್ಯಾರ್ಥಿಗಳು ಶಿಕ್ಷಕರಿಗೆ ಗೌರವ ನೀಡುವುದು ವಿರಳವಾಗಿದೆ. ವಿದ್ಯಾರ್ಥಿಗಳು ಸಹ ತಮಗೆ ವಿದ್ಯೆ ಕಲಿಸಿಕೊಟ್ಟ ಗುರುಗಳನ್ನು ಗೌರವಿಸುವ ಕೆಲಸ ಮಾಡಬೇಕು, ಜೊತೆಗೆ ಶಿಕ್ಷಕರು ಸಹ ಶಿಕ್ಷಕ ವೃತ್ತಿಗೆ ಅಗೌರವ ಬಾರದಂತೆ ನೋಡಿಕೊಳ್ಳಬೇಕೆಂದರು.
ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಆಚರಣ ಸಮಿತಿ ಮತ್ತು ತಾಲ್ಲೂಕು ಆಡಳಿತದಿಂದ ಸನ್ಮಾನಿಸಲಾಯಿತು. ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾಧಿಕಾರಿ ವೆಂಕಟೇಶಪ್ಪ, ಇ.ಓ. ರವೀಂದ್ರ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಾಲಾಜಿ ಹಾಗೂ ಪಟ್ಟಣ ಪಂಚಾಯಿತಿ ಚುನಾಯಿತ ಸದಸ್ಯರು, ಮುಂತಾದವರು ಭಾಗವಹಿಸಿದ್ದರು.
Balaji R's Report
BlackCatNews, Chikkaballapur