ಕೊರೊನಾ ವಾರಾಂತ್ಯ ಕರ್ಫ್ಯೂ ಹಿನ್ನಲೆ ಶನಿವಾರ ಮತ್ತು ಭಾನುವಾರ ಅರಮನೆಗೆ ಪ್ರವಾಸಿಗರ ನಿರ್ಬಂಧ .
0 Comments । By Black Cat News । 21 August, 2021
ಮೈಸೂರು: ಕೋವಿಡ್ ವಾರಾಂತ್ಯದ ಲಾಕ್‌ಡೌನ್ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ಮೈಸೂರು ಅರಮನೆಯನ್ನು ಪ್ರವಾಸಿಗರ ವೀಕ್ಷಣೆಗೆ ಆ.21 ಮತ್ತು 22ರ ಶನಿವಾರ ಮತ್ತು ಭಾನುವಾರ ನಿರ್ಬಂಧಿಸಲಾಗಿದೆ. ಕೊರೊನಾ ವೈರಾಣು ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ವಾರಾಂತ್ಯದ ಲಾಕ್‌ಡೌನ್ ಮಾಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದರಿಂದ ಮೈಸೂರು ಅರಮನೆಯನ್ನು ಈ ಎರಡು ದಿನಗಳು ಸಾರ್ವಜನಿಕರ ವೀಕ್ಷಣೆಗೆ ನಿರ್ಬಂಧಿಸಲಾಗಿದೆ ಎಂದು ಮೈಸೂರು ಅರಮನೆ ಮಂಡಳಿ ಉಪ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಳೆದ ವಾರಾಂತ್ಯವೂ ಸಹ ಮೈಸೂರು ಅರಮನೆ, ಚಾಮುಂಡಿ ಬೆಟ್ಟ ಸೇರಿದಂತೆ ಪ್ರಮುಖ ಸ್ಥಳಗಳಿಗೆ ಸಾರ್ವಜನಿಕರ ಭೇಟಿಗೆ ನಿರ್ಬಂಧ ವಿಧಿಸಲಾಗಿತ್ತು.
PUNEETH CG's Report
BlackCatNews, Mysore